Karnataka ZP TP Elections: ಕರ್ನಾಟಕದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು 2027ರ ಜನವರಿ 15ರೊಳಗೆ ನಡೆಯಲಿವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಪೂರ್ಣ ವಿವರ ಇಲ್ಲಿದೆ…
ರಾಜ್ಯದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ (Zilla and Taluk Panchayat Elections) ಕೊನೆಗೂ ಕಾಲ ಕೂಡಿಬಂದಿದೆ.
ಮುಂಬರುವ 2027ರ ಜನವರಿ 15ರ ಒಳಗಾಗಿ ಈ ಚುನಾವಣೆಗಳನ್ನು ಖಂಡಿತವಾಗಿ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ.
ಮುಗಿದಿದೆ ಕ್ಷೇತ್ರ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣಾ ಸಿದ್ಧತೆಗಳ ಬಗ್ಗೆ ಸ್ಪಷ್ಟನೆ ನೀಡಿದರು. ಈಗಾಗಲೇ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ಮರುಹಂಚಿಕೆ ಅಂದರೆ ಪುನರ್ವಿಂಗಡಣೆ (Delimitation) ಹಾಗೂ ಮೀಸಲಾತಿ (Reservation) ನಿಗದಿ ಮಾಡುವ ಪ್ರಕ್ರಿಯೆಗಳು ಸಂಪೂರ್ಣವಾಗಿ ಮುಗಿದಿವೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೆ ಪೂರಕವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಗಳ ಅಧಿಕೃತ ಮೀಸಲಾತಿ ಪಟ್ಟಿ ಕೂಡ ಬಿಡುಗಡೆಯಾಗಿದೆ. ಯಾವ ಕ್ಷೇತ್ರ ಯಾವ ವರ್ಗ ಹಾಗೂ ಮಹಿಳೆಯ ಪಾಲು ಎಂಬ ಮಾಹಿತಿ ಕೂಡ ಹೊರ ಬಿದ್ದಿದೆ.
ಇದನ್ನೂ ಓದಿ: Hasu Emme Kharidige Subsidy: ಗ್ರಾಮೀಣ ಮಹಿಳೆಯರಿಗೆ ಬಂಪರ್ ಗಿಫ್ಟ್: ಹಸು ಮತ್ತು ಎಮ್ಮೆ ಖರೀದಿಗೆ ₹18,750 ಧನಸಹಾಯ

ಮೊದಲು ಜಿಪಂ-ತಾಪಂ, ಆಮೇಲೆ ಗ್ರಾಪಂ ಎಲೆಕ್ಷನ್
ಚುನಾವಣೆಗಳು ಹೇಗೆ ನಡೆಯಲಿವೆ ಎಂಬ ಬಗ್ಗೆಯೂ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆಗಳು (Local Body Elections) ನಡೆಯಲಿವೆ.
ಆ ನಂತರವಷ್ಟೇ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಚಿವ ಸಂಪುಟ ಸಭೆಯಲ್ಲೂ (Cabinet Meeting) ಸುದೀರ್ಘವಾಗಿ ಚರ್ಚೆ ನಡೆದಿದೆ.
ಶೀಘ್ರದಲ್ಲೇ ಕರಡು ಅಧಿಸೂಚನೆ ಪ್ರಕಟ
ಚುನಾವಣೆಯ ಮುಂದಿನ ಸಿದ್ಧತೆಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಪ್ರಾಥಮಿಕ ಕರಡು ಅಧಿಸೂಚನೆ (Draft Notification) ಪ್ರಕಟವಾಗಲಿದೆ.
ಇದರ ಬಗ್ಗೆ ಏನಾದರೂ ಆಕ್ಷೇಪಣೆಗಳಿದ್ದರೆ (Objections) ಸಲ್ಲಿಸಲು ಸಾರ್ವಜನಿಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗಕ್ಕೆ (State Election Commission) ಅಂತಿಮ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ
ಸದ್ಯಕ್ಕೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Voter List Revision) ಕಾರ್ಯ ನಡೆಯುತ್ತಿದೆ. ಒಂದು ವೇಳೆ ಕೇಂದ್ರ ಚುನಾವಣಾ ಆಯೋಗವು (Election Commission of India) ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲು ತಡಮಾಡಿದರೆ, ಚುನಾವಣೆಗಳು ಜನವರಿಯಲ್ಲಿ ನಡೆಯುವುದು ಖಚಿತ ಎಂದು ಸಚಿವರು ವಿವರಿಸಿದ್ದಾರೆ. ಈ ಚುನಾವಣೆಗಳನ್ನು ಸುಗಮವಾಗಿ ನಡೆಸುವ ಸಂಪೂರ್ಣ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ ಮೇಲಿದೆ.